*ಅನ್ನದಾತರಿಗೆ ಕೇಂದ್ರ ಸರ್ಕಾರದ ದೀಪಾವಳಿ ಗಿಫ್ಟ್ : ಜೋಶಿ* /*ಪ್ರಸ್ತುತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಕ್ಕೆ ಯೋಜನೆ*
ಹೊಸದಿಲ್ಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಇಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.
2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹1310 ಇದ್ದು, ಈಗದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಇನ್ನು, ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಸಹ ಹಾಕಿಕೊಂಡಿದೆ ಎಂದರು.
ದಿನದ ಮಹತ್ವದ ಸುದ್ದಿ
1 *)ಉಪಚುನಾವಣೆಗಳ ಸಿದ್ದತೆಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲು ಸಚಿವರು, ಸಂಸದರು, ಶಾಸಕರೊಂದಿಗೆ ಸಿಎಂ , ಡಿಸಿಎಂ, ಹಾಗೂ ರಾಜ್ಯ ಉಸ್ತುವಾರಿ ಸುರಜೆವಾಲಾ ವಿಡಿಯೋ ಸಂವಾದ ನಡೆಸಿ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ರಣತಂತ್ರ ರೂಪಿಸಿದರು.*
2) *ನ್ಯುಜಿಲೆಂಡ್ ಮಹಿಳೆಯರು ಭಾರತದ ಮಹಿಳಾ ತಂಡದ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 76 ರನ್ ಗಳಿಂದ ಗೆಲುವು ದಾಖಲಿಸಿದರು.*
3) *ಶಿಗ್ಗಾಂವಿ ಯಲ್ಲಿ ಬಿಜೆಪಿ ಅಭ್ಯರ್ಥಿ ಭಾರತ ಬೊಮ್ಮಾಯಿ ಪರ ತಾಯಿ ಚೆನ್ನಮ್ಮ ಬೊಮ್ಮಾಯಿ ಮತಯಾಚನೆ*
4) *ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ, ಶಾಸಕ ಮಹೇಶ್ ಟೆಂಗಿನಕಾಯಿ, ಹರೀಶ್ ಪೂಂಜಾ ಅವರನ್ನೊಳಗೊಂಡ ಐವರ ತಂಡವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಚಿಸಿದ್ದಾರೆ, ಈ ತಂಡವು ವಿಜಯಪುರ ಜಿಲ್ಲೆಯಾದ್ಯಂತ ಭೇಟಿ ನೀಡಿ ಅಹವಾಲು ಆಲಿಸಲಿದೆ.*