ಪಿ.ತ್ಯಾಗರಾಜ್, ಜಯಪ್ರಕಾಶ್ ,ರಾಘವೇಂದ್ರ ಭಟ್ ನಿಯುಕ್ತಿ ಮಾಡಿ ಅಧಿಸೂಚನೆ/ KUWJ ಅಭಿನಂದನೆ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ಮೂವರು ಹಿರಿಯ ಪತ್ರಕರ್ತರು ನೇಮಕಗೊಂಡಿದ್ದಾರೆ.
ಪಿ. ತ್ಯಾಗರಾಜ್ – ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ -1, ಆರ್. ಜಯಪ್ರಕಾಶ್ – ಮಾಧ್ಯಮ ಕಾರ್ಯದರ್ಶಿ 2 ಮತ್ತು ರಾಘವೇಂದ್ರ ಭಟ್ – ಮಾಧ್ಯಮ ಕಾರ್ಯದರ್ಶಿ-3 ಆಗಿ ಅವರುಗಳನ್ನು ನೇಮಿಸಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಅಧಿಸೂಚನೆ ಹೊರಡಿಸಿದೆ.

ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಅಂಕಣಕಾರರಾಗಿ ಸಹ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಇವರು ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆಗಿದ್ದಾಗ ಅವರ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು.
*KUWJ ಅಭಿನಂದನೆ* : ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಪಿ. . ತ್ಯಾಗರಾಜ್, ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್
ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಅಭಿನಂದನೆ ಸಲ್ಲಿಸಿದೆ.
ಇವರ ಅವಧಿಯಲ್ಲಿ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಕ್ರಮಗಳು ಜಾರಿಯಾಗಲಿ ಹಾಗೂ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶುಭ ಹಾರೈಸಿದ್ದಾರೆ.
ಸರ್ಕಾರ ಮತ್ತು ಮಾಧ್ಯಮಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮೂವರು ಮಾಧ್ಯಮ ಕಾರ್ಯದರ್ಶಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ, ಪತ್ರಕರ್ತರ ಹಿತಾಸಕ್ತಿಗೆ ಸಹಕಾರಿಯಾಗುವ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.




