*ಅನ್ನದಾತರ ಹಬ್ಬಕ್ಕೆ ದಿನಗಣನೆ* / *ಸುಮಾರು 16 ಲಕ್ಷ ಜನ ಭಾಗವಹಿಸುವ ನಿರೀಕ್ಷೆ*
ಧಾರವಾಡ: ಪೇಡಾ ನಗರಿಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹವಾಮಾನ ವೈಪರೀತ್ಯ ನಿವ೯ಹಣೆಗೆ ಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿಯಲ್ಲಿ ದಿ.21 ರಿಂದ 24 ರವರೆಗೆ ಕೃಷಿ ಮೇಳ (ಅನ್ನದಾತರ ಹಬ್ಬ ) ನಡೆಯಲಿದೆ.
ಕುಲಪತಿ ಡಾ.ಪಿ.ಎಲ್.ಪಾಟೀಲ
ಇಂದು ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ, ದಿ. 22 ರಂದು ಬೆಳಿಗ್ಗೆ 10-30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಉಪಮುಖ್ಯಮಂತ್ರಿಗಳಾದ ಸಚಿವ ಡಿ.ಕೆ.ಶಿವಕುಮಾರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉಪಸ್ಥಿತಿತರಿರುವರು ಎಂದರು.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮದಲ್ಲಿ ಕೃಷಿ ಪ್ರಕಟಣೆಗಳ ಬಿಡುಗಡೆ ಮಾಡಲಿದ್ದು
ಸಚಿವರುಗಳಾದ ಹೆಚ್.ಕೆ.ಪಾಟೀಲ, ಎಮ್.ಬಿ.ಪಾಟೀಲ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಂಕಾಳ್ ವೈದ್ಯ,ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಪಾಲ್ಗೊಳ್ಳಲಿರುವರು.
ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದಲ್ಲಿ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಈ ಮೇಳದ ಮುಖ್ಯ ಉದ್ದೇಶವಾಗಿದ್ದು, ಈ ಮೇಳದಲ್ಲಿ ಸುಮಾರು 14-16 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಮೊದಲಬಾರಿಗೆ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡುವ ವ್ಯವಸ್ಥೆಯನ್ನು ಈ ಕೃಷಿ ಮೇಳದಲ್ಲಿ ಕಲ್ಪಿಸಲಾಗಿದೆ ಎಂದರು
ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳು, ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ದು ಮತ್ತು ಅಂತರ್ಜಲ ಮರುಪೂರಣ,ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ, ಹೈಟೆಕ್ ತೋಟಗಾರಿಕೆ. ಹಣ್ಣು-ಹೂವಿನ ಪ್ರದರ್ಶನ ಮತ್ತು ಕೀಟ ಪ್ರಪಂಚ, ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡೋನ್ ಪ್ರದರ್ಶನ, ಕೃಷಿ ತಜ್ಞರೊಂದಿಗೆ ಸಮಾಲೋಚನೆ, ರೈತರ ಆವಿಷ್ಕಾರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ, ಕೃಷಿ ಅರಣ್ಯ, ಮೇವಿನ ಬೆಳೆಗಳ ತಾಂತ್ರಿಕತೆ, ಪಶು ಸಂಗೋಪನೆ ಹಾಗೂ ಜಾನುವಾರುಗಳ ಪ್ರದರ್ಶನ, ಮೌಲ್ಯವರ್ಧನೆ, ದ್ವಿತೀಯ ಕೃಷಿ ಮತ್ತು ಸಮುದಾಯ ವಿಜ್ಞಾನ ತಾಂತ್ರಿಕತೆಗಳು ಆಕಷ೯ಣೆಗಳಾಗಿವೆ ಎಂದರು.
ಗೋಷ್ಟಿಯಲ್ಲಿ ವಿಸ್ತರಣಾ ನಿರ್ದೇಶಕ ಹಾಗೂ ಕೃಷಿ ಮೇಳದ ಅಧ್ಯಕ್ಷ ಡಾ. ಎಸ್.ಎಸ್. ಅಂಗಡಿ, ಕೃಷಿ ವಿ.ವಿ.ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.