*ಒಳಮೀಸಲಾತಿ ಜಾರಿ ಪರಾಮರ್ಶೆಗೆ ಏಕಸದಸ್ಯ ಆಯೋಗ ರಚನೆ*
ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.
*
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ,ಏಕ ಸದಸ್ಯ ಸದಸ್ಯ ಾಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದು ತಿಳಿಸಿದರು.
*ದಿನದ ಮಹತ್ವದ ಸುದ್ದಿಗಳು*
1) *ಕೇರಳದ ಕಾಸರಗೋಡಿನ ನೀಲೇಶ್ವರ ದೇವಾಲಯದಲ್ಲಿ ನಡೆದ ಪಟಾಕಿ ದುರಂತದಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.*

2 ) *ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.*
*ಧಾರವಾಡದಲ್ಲಿ ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಫ್ ಕಾನೂನು ಮಾಡಿತೋ? ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ಎಂದು ಆಕ್ಷೇಪಿಸಿದರು.*
3) *ಉಪ ಸಮರದ ನಾಮಪತ್ರ ವಾಪಸ್ ಗೆ ನಾಳೆ ಕೊನೆಯ ದಿನ ಆಗಿದ್ದು ಶಿಗ್ಗಾಂವಿ ಯಲ್ಲಿ ಅಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆಯುವರೊ ಇಲ್ಲವೋ ಕೂತೂಹಲ ಕೆರಳಿಸಿದೆ. ಕಣದಲ್ಲಿ ಉಳಿದರೆ ಕೈ ಅಭ್ಯರ್ಥಿಗೆ ಕಷ್ಟ*.




