*50ಕ್ಕೂ ಹೆಚ್ಚು ಜನರಿಗೆ ಗಾಯ – ಇಂದಿನ ಪುಣ್ಯ ಸ್ನಾನ ರದ್ದು*
ಪ್ರಯಾಗರಾಜ :ಉತ್ತರ ಪ್ರದೇಶದ ಪ್ರಯಾಗ ರಾಜನಲ್ಲಿ ನಡೆದಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು 17ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತರ ಸಂಖ್ಯೆ ಬಗ್ಗೆ ಇನ್ನೂ ಖಚಿತವಾಗಿಲ್ಲವಾಗಿದೆ.
ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಕೋಟಿ ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬಂದಿದೆ.ಬ್ಯಾರೀಕೇಡ ತಳ್ಳಿ ಏಕಾಏಕಿ ಭಕ್ತರು ಪವಿತ್ರ ಸ್ನಾನಕ್ಕೆ ಹೋಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತ ಹಿನ್ನೆಲೆಯಲ್ಲಿ 13 ಅಖಾಡಾಗಳು ಪುಣ್ಯ ಸ್ನಾನ ರದ್ದುಗೊಳಿಸಿದೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.