*ಮುಡಾ, ಪೋಕ್ಸೋ ಪ್ರಕರಣದ ತೀರ್ಪು ಹೈಕೋರ್ಟನಿಂದ ಪ್ರಕಟ*
ಧಾರವಾಡ : ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕರೆ, ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು ಈ ಎರಡೂ ಆದೇಶಗಳನ್ನು ಹೊರಡಿಸಿದೆ.
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಇಂದು (ಫೆ.೦7) ನಿರಾಕರಿಸಿದೆ.
ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿ ಕಾದಿರಿಸಿರುವ ತೀರ್ಪನ್ನು ಶುಕ್ರವಾರ ಬೆಳಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿತು.
ಸಿಬಿಐ ತನಿಖೆಗೆ ನೀಡಲು ನಿರಾಕರಿಸಿತಲ್ಲದೇ
ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಅಲ್ಲದೇ ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ನ್ಯಾಯಪೀಠ ಅಭಿಪ್ರಾಯ ಪಟ್ಟಿತು.
ಯಡಿಯೂರಪ್ಪ ಅವರ ಪ್ರಕರಣ ರದ್ದು ಮಾಡಲು ನಿರಾಕರಿಸಿರುವುದರಿಂದ ಯಡಿಯೂರಪ್ಪಗೆ ತತ್ಕಾಲ ನಿರಾಳವಾದರೂ ಕಷ್ಟ ತಪ್ಪಿಲ್ಲವಾಗಿದೆ.ನ್ಯಾಯಪೀಠ ಕೇವಲ ಜಾಮೀನು ನೀಡಿದೆ ಹೊರತು ಪ್ರಕರಣ ರದ್ದು ಮಾಡಿಲ್ಲ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಅಲ್ಲದೇ ತಾಂತ್ರಿಕ ಕಾರಣಕ್ಕೆ ಈ ಪ್ರಕರಣವನ್ನು ಹೈಕೋರ್ಟ್, ಪೋಕ್ಸೋ ಕೋರ್ಟ್ಗೆ ವಾಪಸ್ ಮರಳಿಸಿದೆ. ಹೀಗಾಗಿ ಪೋಕ್ಸೋ ಕೋರ್ಟನಲ್ಲೇ ಯಡಿಯೂರಪ್ಪ ಪ್ರಕರಣ ಎದುರಿಸಬೇಕಿದೆ.