ಧಾರವಾಡ: ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ
ಶಂಕರ ಮುಗದ ಅವರ ಗುಂಪು ಮೇಲುಗೈ ಸಾಧಿಸಿದೆ.
ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಣ ಗುದ್ದಾಟದಲ್ಲಿ ಕೈ ಪಡೆಗೆ ಹಿನ್ನೆಡೆ ಆಗಿದೆ.
ಕಳೆದ ಜುಲೈ 28 ರಂದು ನಡೆದ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲಾಗಿತ್ತು
ಈ ತಡೆಯಾಜ್ಞೆ ಪ್ರಶ್ನಿಸಿ ಶಂಕರ ಮುಗದ ಸುಪ್ರಿಂ ಕೋಟ್೯ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ಧಾರವಾಡ: ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ
ಶಂಕರ ಮುಗದ ಅವರ ಗುಂಪು ಮೇಲುಗೈ ಸಾಧಿಸಿದೆ.
ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಣ ಗುದ್ದಾಟದಲ್ಲಿ ಕೈ ಪಡೆಗೆ ಹಿನ್ನೆಡೆ ಆಗಿದೆ.
ಕಳೆದ ಜುಲೈ 28 ರಂದು ನಡೆದ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲಾಗಿತ್ತು
ಈ ತಡೆಯಾಜ್ಞೆ ಪ್ರಶ್ನಿಸಿ ಶಂಕರ ಮುಗದ ಸುಪ್ರಿಂ ಕೋಟ್೯ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೇ ತಿಂಗಳು 15 ರಂದು ಫಲಿತಾಂಶ ಪ್ರಕಟಿಸಲು ಸೂಚಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ 19 ರಂದು ಸ್ಪಷ್ಟನೆ ಕೂಡ ನೀಡಿತ್ತು.
ಸೋಮವಾರ ಧಾರವಾಡ ಹೈಕೋರ್ಟ್ ನಲ್ಲಿ ಸುಪ್ರಿಂ ಸೂಚನೆಯಂತೆ ಫಲಿತಾಂಶ ಪ್ರಕಟಿಸಲಾಯಿತು. ಒಟ್ಟು 13 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಶಂಕರ ಮುಗದ ಅವರ ನೇತೃತ್ವದ ಎಲ್ಲರೂ ಆಯ್ಕೆಯಾಗಿದ್ದಾರೆ.
ಎಸ್.ಟಿ.ಮೀಸಲು ಕ್ಷೇತ್ರಕ್ಕೆ ಅವಿರೋಧ ಆಯ್ಕೆ ನಡೆದಿತ್ತು.
ಕಾಂಗ್ರೆಸ್ ಮುಖಂಡರು ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ತಂದಿದ್ದರೂ ಅಂತಿಮವಾಗಿ ಶಂಕರ ಮುಗದ ಅವರು ಜಯ ಸಾಧಿಸಿ ಗಮನ ಸೆಳೆದಿದ್ದಾರೆ.
ಈ ಹಣಾಹಣಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ಅವರ ಬೆಂಬಲ ಮತ್ತು ಮಾರ್ಗದರ್ಶನ ಮುಗದ ಅವರಿಗೆ ಜಯ ತಂದಂತಾಗಿದೆ. ನ್ಯಾಯಾಲಯವು ಇದೇ ತಿಂಗಳು 15 ರಂದು ಫಲಿತಾಂಶ ಪ್ರಕಟಿಸಲು ಸೂಚಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ 19 ರಂದು ಸ್ಪಷ್ಟನೆ ಕೂಡ ನೀಡಿತ್ತು.
ಸೋಮವಾರ ಧಾರವಾಡ ಹೈಕೋರ್ಟ್ ನಲ್ಲಿ ಸುಪ್ರಿಂ ಸೂಚನೆಯಂತೆ ಫಲಿತಾಂಶ ಪ್ರಕಟಿಸಲಾಯಿತು. ಒಟ್ಟು 13 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಶಂಕರ ಮುಗದ ಅವರ ನೇತೃತ್ವದ ಎಲ್ಲರೂ ಆಯ್ಕೆಯಾಗಿದ್ದಾರೆ.
ಎಸ್.ಟಿ.ಮೀಸಲು ಕ್ಷೇತ್ರಕ್ಕೆ ಅವಿರೋಧ ಆಯ್ಕೆ ನಡೆದಿತ್ತು.
ಕಾಂಗ್ರೆಸ್ ಮುಖಂಡರು ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ತಂದಿದ್ದರೂ ಅಂತಿಮವಾಗಿ ಶಂಕರ ಮುಗದ ಅವರು ಜಯ ಸಾಧಿಸಿ ಗಮನ ಸೆಳೆದಿದ್ದಾರೆ.
ಈ ಹಣಾಹಣಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ಅವರ ಬೆಂಬಲ ಮತ್ತು ಮಾರ್ಗದರ್ಶನ ಮುಗದ ಅವರಿಗೆ ಜಯ ತಂದಂತಾಗಿದೆ.