ಧಾರವಾಡ: ರಾಜ್ಯದ ಹಲವೆಡೆ ಇಂದು ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು,ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಸಚಂದ್ರ ನಾಟೀಕರ್ ಮನೆ ಮತ್ತು ವಿಭಾಗದ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಕರ್ನಾಟಕ ವಿವಿ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿರುವ ಇವರು ಕರ್ನಾಟಕ ವಿವಿಯ ಅಂಬೇಡ್ಕರ್ ಸ್ಟಡೀಸ್ ಸಂಯೋಜಕರು ಆಗಿದ್ದಾರೆ.
ಪೇಡೆನಗರದ ಯಾಲಕ್ಕಿ ಶೆಟ್ಟರ್ ಕಾಲೊನಿಯಲ್ಲಿರುವ ಸುಭಾಸಚಂದ್ರ ನಾಟೀಕರ್ ಮನೆ
ಅಲ್ಲದೇ ಸಮಾಜಶಾಸ್ತ್ರ ವಿಭಾಗ, ಅಂಬೇಡ್ಕರ್ ಸ್ಟಡೀಸ್, ತಾಳಿಕೋಟೆಯ ಸ್ವಂತ ಮನೆಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.




