ಧಾರವಾಡ:ನಗರದ ಹಿರಿಯ ವಕೀಲರು , ನಿನ್ನೆಯಷ್ಟೇ ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿ.ಡಿ.ಕಾಮರಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಧಾರವಾಡ ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ಹಲವು ಹೋರಾಟಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.
ಹಿರಿ-ಕಿರಿಯ ವಕೀಲರ ಜೊತೆ ಆತ್ಮೀಯ ಬಾಂಧವ್ಯ ಹೊಂದಿರುವ
ಕಾಮರಡ್ಡಿ ಅವರು, ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಮುಖರಲ್ಲಿ ಒಬ್ಬರಾಗಿದ್ದ ಕಾಮರಡ್ಡಿ ಅವರನ್ನು ಕಡೆಗಣಿಸಿದ್ದು ಪಕ್ಷ ತ್ಯಜಿಸಲು ಮುಖ್ಯ ಕಾರಣ ಎನ್ನಲಾಗಿದೆ.ಇವರ ಪತ್ನಿ ಶೈಲಾ ಕಾಮರೆಡ್ಡಿ ಸಹ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರಾಗಿದ್ದರು.
ಹಲವಾರು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ತಮ್ಮ ರಾಜಕೀಯ ಚಟುವಟಿಕೆ ನಡೆಸುತ್ತಿದ್ದ ಕಾಮರಡ್ಡಿ ಅವರ ನಿರ್ಗಮನ ಕೈ ಪಾಳಯಕ್ಕೆ ಅದರಲ್ಲೂ ವಿಧಾನ ಪರಿಷತ್ ನ ಪದವೀಧರ ಕ್ಷೇತ್ರದ ಚುನಾವಣೆಯ ಹೊಸ್ತಿಲಲ್ಲಿ ನಡೆದ ಈ ಬೆಳವಣಿಗೆ ಪ್ರಾಮುಖ್ಯತೆ ಪಡೆದುಕೊಂಡಿದೆ.

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ
ಸೋಮವಾರ ರಾಜಿನಾಮೆ ಸಲ್ಲಿಸಿರುವ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಯತ್ನ ನಡೆದಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಕಾಮರಡ್ಡಿ ಅವರನ್ನು ಬಿಜೆಪಿಯತ್ತ ಸೆಳೆಯುವಲ್ಲಿ ಯುವ ಮುಖಂಡ, ವಕೀಲ ಶರಣಬಸವ ಅಂಗಡಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.



