ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ದೇಶದ ಪ್ರಮುಖ ರಾಜಕಾರಣಿ ಅಜಿತ್ ಪವಾರ್ ಇಂದು (ಜ 28)ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಮುಂಬೈನಿಂದ ಇತರ ಆರು ಜನರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಬಾರಾಮತಿ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸುತ್ತಿದ್ದಾಗ ವಿಮಾನ ಪತನವಾಗಿದ್ದು, ಅವಘಡ ನಡೆದ ಬಳಿಕ ತುರ್ತು ಪ್ರತಿಕ್ರಿಯೆ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿವೆ. ಖಾಸಗಿ ವಿಮಾನ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬಾರಾಮತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 7 ರವರೆಗೆ ಮೂರು ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗಿಯಾಗುವ ಸಲುವಾಗಿ ಅವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಪೈಲಟ್ಗಳು ಮತ್ತು ಅಜಿತ್ ಅವರ ಭದ್ರತಾ ಸಿಬಂದಿ ಮತ್ತು ಆಪ್ತ ಸಹಾಯಕ ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದಾರೆ.



