*ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ : ಸಚಿವ ಎಚ್.ಕೆ. ಪಾಟೀಲ್*
ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ತಿಳಿಸಿದರು.
ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ರಾಜ್ಯಮಟ್ಟದ ಸಮಿತಿಯ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು.
ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಸವದತ್ತಿಯಲ್ಲಮ್ಮನ ಗುಡ್ಡದಲ್ಲಿ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ಪ್ರಕಟಿಸಲಾಗಿತ್ತು. ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಬದಲಾವಣೆ ಕಾಣುತ್ತೆವೆ ಎಂಬುದು ಭಕ್ತರಿಗೆ ವಿಧಿತವಾಯಿತು ಎಂದು ಸಚಿವರು ಬೆಳಗಾವಿ ಜಿಲ್ಲಾ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ಭಾರತ ಹುಣ್ಣಿಮೆ ಸಂದರ್ಭದಲ್ಲಿ 3 ಲಕ್ಷ ಭಕ್ತರಿಗೆ ಮಜ್ಜಿಗೆ ದಾಸೋಹ ಕೈಗಳ್ಳಲಾಗಿದೆ ಎಂದರು.
ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ಉಳಿದುಕೊಳ್ಳಲು ವ್ಯವಸ್ಥೆ, ಚಕ್ಕಡಿ ಕಟ್ಟಿಕೊಂಡು ಬರುವವರಿಗೆ ಪಶು ಆಹಾರಕ್ಕಾಗಿ ಮೇವು ದಾಸೋಹ, ರಿಂಗ್ ರಸ್ತೆ, ವಯಸ್ಸಾದವರಿಗೆ ದರ್ಶನಕ್ಕೆ ವ್ಯವಸ್ಥೆ ಮುಂತಾದವು ಸೇರಿದಂತೆ ಎಲ್ಲಾ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಪ್ರವಾಸೋದ್ಯಮ ಕಾರ್ಯದರ್ಶಿ, ಸಲ್ಮಾ ಫಾಹೀಮ್, ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಟಿ.ವೆಂಕಟೇಶ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಭಾಗವಹಿಸಿದ್ದರು.
*ಇತರೆ ಮಹತ್ವದ ಸುದ್ದಿಗಳು*
*ಕೋವಿಡ್ ಅವ್ಯವಹಾರ : 2ನೇ ಮಧ್ಯಂತರ ವರದಿ*
ಬೆಂಗಳೂರು ;ಕೋವಿಡ್ 19 ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿಗಳಿಗೆ ಇಂದು ಸಲ್ಲಿಸಿದರು.
ಒಟ್ಟು ಏಳು ಸಂಪುಟಗಳ ಮಧ್ಯಂತರ ವರದಿ ಇದಾಗಿದ್ದು, ಇದರಲ್ಲಿ ನಾಲ್ಕು ಸಂಪುಟಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಹಗರಣ ಮತ್ತು ಅವ್ಯವಹಾರಗಳದ್ದಾಗಿವೆ.
*ಜೀ಼ ಕನ್ನಡದ ಮಹಾನಟಿ ಸೀಸನ್ 2 ಆಡಿಷನ್ ನಾಳೆ ಭಾನುವಾರ ಹುಬ್ಬಳ್ಳಿಯಲ್ಲಿ*
ಜೀ಼ ಕನ್ನಡ ವಾಹಿನಿ ಇದೀಗ ಮಹಾನಟಿ ಸೀಸನ್-2 ನ ಹೊತ್ತುತರುತ್ತಿದೆ.
ಮಹಾನಟಿ ಮತ್ತಷ್ಟು ನಟನೆಯ ಹಸಿವಿರುವವರಿಗಾಗಿ ಇದು ಮಹತ್ವದ ವೇದಿಕೆಯಾಗಿದೆ .
ಮಹಾನಟಿ ಸೀಸನ್-2 ಆಡಿಷನ್ ಗೆ 18 ರಿಂದ 28 ವರುಷದ ಒಳಗಿನ ಕಲಾಸಕ್ತ ಯುವತಿಯರು ಭಾಗವಹಿಸಬಹುದಾಗಿದೆ.ಆಡಿಷನ್ ನಲ್ಲಿ ಭಾಗವಹಿಸಲು ಬರುವಾಗ ನಿಮ್ಮ ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಅಡ್ರೆಸ್ ಪ್ರೂಫ್ ಜೊತೆ 06 ಏಪ್ರಿಲ್ 2025 ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ,ಕನಕದಾಸ ಶಿಕ್ಷಣ ಸಮಿತಿ,ವಿಜಯನಗರ ಪಿಯು ಕಾಲೇಜ್.ವಿದ್ಯಾನಗರ.ಹುಬ್ಬಳ್ಳಿ.ಇಲ್ಲಿ ಆಡಿಷನ್ ನಡೆಯುವ ಆಡಿಷನ್ ದಲ್ಲಿ ಪಾಲ್ಗೊಳ್ಳಬಹುದು.