ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಗೆರೆ ದಾಟಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ದುಲ್ ಜಬ್ಬಾರ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಕೆಲಸ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈಗಾಗಲೆ ನಾಸೀರ್ ಅಹಮದ್ ಗೆ ಸಹ ಕೊಟ್ಟ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಕಟಣೆಯಲ್ಲಿ, ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿಯಾದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗಿದೆ.




