*ವಿದೇಶಾಂಗ ಸಚಿವಾಲಯದ ಕ್ರಮಗಳಿಗೆ ಸಕಲ ನೆರವು : ಪರಮೇಶ್ವರ್ / ಹುಬ್ಬಳ್ಳಿಯಲ್ಲಿ ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ*
ಬೆಂಗಳೂರು : ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಮಾಧ್ಯಮಗಳ ಮುಂದೆ ಇಂದು ಮಾತನಾಡುತ್ತಾ ಅವರು ಕೇಂದ್ರ ವಿದೇಶಾಂಗ ಸಚಿವಾಲಯ ತೆಗೆದುಕೊಳ್ಳುವ ಕ್ರಮಗಳಿಗೆ ರಾಜ್ಯದ ಪೊಲೀಸರು ಸಕಲ ನೆರವು ನೀಡುವರೆಂದರು.
ರಾಜ್ಯದಲ್ಲಿ ಅಧಿಕೃತವಾಗಿ ವಾಸ ಮಾಡುತ್ತಿರುವ ಪಾಕಿಸ್ತಾನೀಯರನ್ನು ಪರಿಶೀಲಿಸಿ ಅವರ ವೀಸಾಗಳನ್ನು ರದ್ದು ಮಾಡಿ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು .
ಸದ್ಯಕ್ಕೆ ಪಾಕಿಸ್ತಾನಿ ಪ್ರಜೆಗಳ ವಿರುದ್ಧಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ರಾಷ್ಟ್ರೀಯ ಭದ್ರತಾ ವಿಚಾರವಾಗಿರುವುದರಿಂದ ಕರ್ನಾಟಕವೂ ಸೇರಿದಂತೆ ಬೇರೆಲ್ಲಾ ಕಡೆ ಇರುವ ಸ್ವೀಪರ್ಸೆಲ್ಗಳ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ಇರುತ್ತದೆ. ಇಸ್ರೋ, ಡಿಆರ್ಡಿಒ ಎಲ್ಲಾ ಕಡೆ ವಿಶೇಷ ಭದ್ರತಾ ವ್ಯವಸ್ಥೆಗಳಿವೆ. ರಾಜ್ಯದ ಪೊಲೀಸರು ಅದಕ್ಕೆ ಅಗತ್ಯ ಬೆಂಬಲ ನೀಡಿರುತ್ತಾರೆ ಒಂದು ವೇಳೆ ಆ ರೀತಿ ಅಕ್ರಮವಾಗಿ ನೆಲೆಸಿದ್ದರೆ ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು,
ಉಗ್ರರ ದಾಳಿಯಲ್ಲಿ ಕೇಂದ್ರ ಗುಪ್ತಚರ ವೈಫಲ್ಯ ಇದೆ. ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ :ಪೆಹಲ್ಗಾಂನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿ ಕೃತ್ಯವನ್ನು ಹಾಗೂ ಸಿಇಟಿ ಪರೀಕ್ಷೆ ವೇಳೆ ವಿಪ್ರ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಖಂಡಿಸಿ ನಗರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಜನಿವಾರ ಕತ್ತರಿಸಿದ ಅಧಿಕಾರಿಗಳಿಗೆ ಧಿಕ್ಕಾರ, ಸನಾತನ ಹಿಂದೂ ಧರ್ಮಕ್ಕೆ ಜಯವಾಗಲಿ, ಭಯೋತ್ಪಾದಕರಿಗೆ ಧಿಕ್ಕಾರ ಕೂಗಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಗೋವಿಂದ ಜೋಶಿ, ಎಚ್.ಎನ್.ನಂದಕುಮಾರ , ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಲಕ್ಷ್ಮಣ ಕುಲಕರ್ಣಿ, ಮುಖಂಡರಾದ ಎ.ಸಿ.ಗೋಪಾಲ, ಹನುಮಂತ ಡಂಬಳ,
ಜಯತೀರ್ಥ ಕಟ್ಟಿ, ಸತೀಶ್ ಶೇಜವಾಡಕರ, ದತ್ತಮೂರ್ತಿ ಕುಲಕರ್ಣಿ, ಮನೋಹರ ಪರ್ವತಿ, ಭಾಗ್ಯಶ್ರೀ, ರವಿ ಆಚಾರ, ವೇಣುಗೋಪಾಲ ಆಚಾರ್ಯ, ಸಮೀರಾಚಾರ್ಯ, ಹನುಮಂತ ನಿರಂಜನ ಸೇರಿದಂತೆ ಜನಿವಾರ ಧಾರಣೆ ಮಾಡುವ ಉಳಿದ ಸಮುದಾಯದ ಪ್ರಮುಖರು, ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.