ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲಿನಲ್ಲಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ ಗೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಶಾಸಕ ಸ್ಥಾನದ ಅನರ್ಹತೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಜನಪ್ರತಿನಿಧಿ ಕಾಯ್ದೆ 8ರಡಿ ಈ ಆದೇಶ ಮಾಡಿದ್ದು ಈ ಸ್ಥಾನಕ್ಕೆ ಆರು ತಿಂಗಳ ಒಳಗೆ ಮರು ಚುನಾವಣೆ ನಿಶ್ಚಿತವಾಗಿದೆ.





