ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಹದಿನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡು 91ಜನ ಜೂಜುಕೋರರನ್ನು ಬಂಧಿಸಿದ್ದಾರೆ.ಆಯುಕ್ತ ಭೂಷಣ್ ಬೋರಸೆ ಈ ಕುರಿತು ಮಾಹಿತಿ ನೀಡಿದ್ದು, ಏಳು ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದಿದ್ದಾರೆ.

ಎಪಿಎಂಸಿ ನವನಗರ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ 34 ಜೂಜುಕೋರರು, ಕೇಶ್ವಾಪುರ ವ್ಯಾಪ್ತಿಯಲ್ಲಿ ಐವರು, ಹಳೇ ಹುಬ್ಬಳ್ಳಿಯಲ್ಲಿ ಎರಡು ಪ್ರಕರಣಗಳಲ್ಲಿ ಒಂಬತ್ತು ಜನ, ಹುಬ್ಬಳ್ಳಿ ಉಪನಗರದಲ್ಲಿ ಹನ್ನೆರಡು, ಧಾರವಾಡ ಶಹರದಲ್ಲಿ ಮೂರು ಪ್ರಕರಣಗಳಲ್ಲಿ 12, ವಿದ್ಯಾಗಿರಿಯಲ್ಲಿ ಮೂರು ಪ್ರಕರಣಗಳಲ್ಲಿ ಹತ್ತು, ಅಲ್ಲದೆ ಹುಬ್ಬಳ್ಳಿ ಶಹರದಲ್ಲಿ ಐವರನ್ನು ಬಂಧಿಸಲಾಗಿದೆ.
ದೀಪಾವಳಿ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.




