*ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಂಟು ತಂಡಗಳಿಂದ ಬೆಳ್ಳಂ ಬೆಳಿಗ್ಗೆ ರೇಡ್*
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಸದ, ಶಾಸಕರು ಹಾಗೂ ಜನ ಪ್ರತಿನಿಧಿಗಳ ಆಪ್ತರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ) ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ
ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ.ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಇಂದು ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎನ್ನಲಾಗಿದೆ.
ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಂಚಲಾಗಿದೆ ಎಂಬ ಪ್ರ ಮಾಹಿತಿಗೆ ಸಂಬಂಧಪಟ್ಟಂತೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕಂಪ್ಲಿ ಮತ್ತು ಕುರುಗೋಡು ಶಾಸಕರಾದ ಗಣೇಶರ ನಿವಾಸದಲ್ಲಿ,
ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ ಅವರ ಮನೆ ಹಾಗೂ ಕಚೇರಿ ಪರಿಶೀಲನೆಬಳ್ಳಾರಿ ನಗರದ ಶಾಸಕರುಗಳಾದ ಭರತ್ ರೆಡ್ಡಿ ಮತ್ತು ನಾಗೇಂದ್ರ ಅವರ ಮನೆ ಮತ್ತು ಕಚೇರಿ ಪರಿಶೀಲನೆ
ಸಂಡೂರಿನ ಸಂಸದ ತುಕಾರಾಂ ಅವರ ನಿವಾಸದಲ್ಲಿಯೂ ಶೋಧ ನಡೆಸುತ್ತಿದ್ದಾರೆ.