*ಹಸಿ ಹಸಿ ಸುಳ್ಳು ಹೇಳುವ ಮೋದಿ*
*ಗ್ಯಾರಂಟಿ ಬಂದು ಪರೀಕ್ಷಿಸಲಿ*,
*ನಿಜವಾದರೆ ರಾಜೀನಾಮೆ ಕೊಡ್ತಾರಾ- ಸಿದ್ದರಾಮಯ್ಯ ಸವಾಲು*
ಸೊಲ್ಲಾಪುರ : ಪ್ರಧಾನಿ ಮೋದಿ ಬರ್ತಾರೆ, ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ ಎಂದು ಕರ್ನಾಟಕ ಸಿ.ಎಂ.ಸಿದ್ದರಾಮಯ್ಯ ಹೇಳಿದರು.
ಮಹಾರಾಷ್ಟ್ರದ ನಾನಾ ಕಡೆ ಚುನಾವಣಾ ಪ್ರಚಾರ ಪೂರೈಸಿ, ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಎಂದು ಪ್ರಧಾನಿಗೆ ಸವಾಲು ಹಾಕಿದರು.
ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು.
ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ, ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ.
ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ.ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.
ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು.