ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಮಿತಿ ಮೀರಿದ ಹಾವಳಿಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ತಂದಿರುವ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ಸಹ ರಾಜ್ಯಪಾಲರು ನೀಡಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆಯನ್ನು ಮೊದಲು ಕಳುಹಿಸಿತ್ತು. ಆದರೆ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ ಕುರಿತಾದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಪುನಃ ಕಳುಹಿಸಿತ್ತು.ಅಂತಿಮವಾಗಿ ಅದನ್ನು ಪರಿಶೀಲಿಸಿ ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.