ಮಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಪರಿಸರದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಮುಂತಾದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿಯವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಸಮಾಧಿಗಳು, ಕಣ್ಮರೆಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲಿನ ಅಪರಾಧಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ಅನ್ನು ರಚಿಸಿದ್ದು ಅದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯ ನಿರ್ವಹಿಸಲಿದೆ.