ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಇಪ್ಪತ್ನಾಲ್ಕನೇ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಹಿಂದೆ ಇವರ ತಂದೆ ಇತ್ತೀಚೆಗೆ ನಿಧನರಾದ ದಿ.ಭೀಮಣ್ಣ ಖಂಡ್ರೆ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು.
ಈ ಹುದ್ದೆಗೆ ಮಾಜಿ ಸಿಎಂ ಯಡಿಯೂರಪ್ಪ ಸಹಿತ ಹಲವು ಹೆಸರುಗಳು ಕೇಳಿಬಂದಿದ್ದವು.




