* ಪ್ರಗತಿ ಪರಿಶೀಲನೆ, ಬರ ಪರಿಸ್ಥಿತಿ ಕುರಿತು ಮೂರು ದಿನ ಜಿಲ್ಲೆಯಾದ್ಯಂತ ಮ್ಮವಾಸ – ಚರ್ಚೆ*
ಹುಬ್ಬಳ್ಳಿ : ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವರಾಗಿ ನೇಮಕವಾದ ನಂತರ ಸಂತೋಷ್ ಎಸ್ ಲಾಡ್ ಅವರು ಧಾರವಾಡ ಜಿಲ್ಲೆಗೆ ನಾಳೆ ಭೇಟಿ ನೀಡುತ್ತಿದ್ದು, ಮೂರು ದಿನ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿನ ಅತಿವೃಷ್ಟಿ / ಬರ ಪರಿಸ್ಥಿತಿಗಳ ಪರಿವೀಕ್ಷಣೆ ನಡೆಸಿ, ವಾಸ್ತವ ಸ್ಥಿತಿಯ ವರದಿಯನ್ನು ಸಲ್ಲಿಸಲು ಸಚಿವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಸಂತೋಷ್ ಲಾಡ್ ಅವರಿಗೆ ಧಾರವಾಡ ಜಿಲ್ಲೆಯ ಉಸ್ತುವಾರಿಯನ್ನು ವಹಿಸಲಾಗಿದೆ. ಮುಖ್ಯಮಂತ್ರಿಗಳ ಆದೇಶದಂತೆ ನಾಳೆಯಿಂದಲೇ ಲಾಡ್ ಅವರು ಪ್ರವಾಸ ಕೈಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ಕಲಘಟಗಿಯ ತಾಲೂಕಯ ಪಂಚಾಯಿತಿ ಸಭಾಂಗಣದಲ್ಲಿ ಕಲಘಟಗಿ ತಾಲೂಕು ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಅತಿವೃಷ್ಟಿ/ ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ತದನಂತರ ಕಲಘಟಗಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಇದೇ ದಿನ ಮಧ್ಯಾಹ್ನ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ/ ಬರ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಲಿದ್ದಾರೆ.
ಗುರುವಾರ ಬೆಳಗ್ಗೆ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಬರ ಕುರಿತು ಚರ್ಚೆ ನಡೆಸಲಿದ್ದಾರೆ. ನಂತರ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಬರ ಕುರಿತು ಚರ್ಚೆ ನಡೆಸಲಿದ್ದಾರೆ. ನಂತರ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಅಳ್ನಾವರ ತಾಲೂಕಿನ ಗ್ರಾಮಗಳಲ್ಲಿನ ಅತಿವೃಷ್ಟಿ/ ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ನಾಳೆ *ಬುಧವಾರ ಬೆಳಗ್ಗೆ 07-50* ಕ್ಕೆ *ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ* ನೂತನ ಸಚಿವರಾದ ನಂತರ ಸಂತೋಷ ಲಾಡ್ ಅವರು ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಕಾರಣ ಜಿಲ್ಲೆಯ ಎಲ್ಲ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗ್ರಾಮೀಣ ಅಧ್ಯಕ್ಷ ಅನಿಲ್ ಪಾಟೀಲ ವಿನಂತಿಸಿದ್ದಾರೆ.
ನಂತರ ಸಚಿವರು *ಹುಬ್ಬಳ್ಳಿಯ ಸರ್ಕ್ಯೂಟ್ ಹೌಸನಲ್ಲಿ ಬೆಳಿಗ್ಗೆ 9.30 ರ* ವರೆಗೆ ಲಭ್ಯವಿರುತ್ತಾರೆ.



