*ಮುಂದಿನ ಒಂದು ತಿಂಗಳೊಳಗೆ ಯೋಜನೆ ಜಾರಿ ಬಗ್ಗೆ ಸ್ಪಷ್ಟತೆ – ಸಚಿವ ಲಾಡ್*
ಹುಬ್ಬಳ್ಳಿ, ನ.15: ಹುಬ್ಬಳ್ಳಿ- ಧಾರವಾಡ ನಡುವೆ ಬಿಆರ್ಟಿಎಸ್ (ಬಸ್ ರ್ಯಾಪಿಡ್ ಟ್ರಾನ್ಸಿಸ್ಟ್ ಸಿಸ್ಟಂ) ಬದಲು ಎಲ್ಆರ್ಟಿ (ಲೈಟ್ ರೈಲ್ ಟ್ರಾನ್ಸಿಟ್) ತರುವ ಕುರಿತು ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಆರ್ಟಿ (ಲೈಟ್ ರೈಲ್ ಟ್ರಾನ್ಸಿಟ್) ಬಗ್ಗೆ ಯೋಜನೆ ರೂಪಿಸಲಾಗುತ್ತಿದ್ದು, ಮುಂದಿನ ಒಂದು ತಿಂಗಳಲ್ಲಿ ಸ್ಪಷ್ಟತೆ ದೊರೆಯಲಿದೆ. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಗುಣಮಟ್ಟ ಹಾಗೂ ಹಸ್ತಾಂತರದ ಬಗ್ಗೆ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಹ ಮತ್ತೊಮ್ಮೆ ಸಭೆ ನಡೆಸಲಾಗುವುದು. ಪ್ಲೈ ಓವರ್ ಕಾಮಗಾರಿ ಮತ್ತೆ ಪ್ರಾರಂಭವಾಗಿದೆ. ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 127 ಹೊಸ ಬಸ್ಗಳಿಗೆ ಚಾಲನೆ ನೀಡಲಾಗುತ್ತಿದೆ. ಇಎಸ್ಐ ಆಸ್ಪತ್ರೆಗಳಿಗೆ ಜನರು ಬರುವಂತೆ ಮಾಡಬೇಕಿದೆ. ಬೇರೆ ಆಸ್ಪತ್ರೆಗಳಿಗೆ ಫಲಾನುಭವಿಗಳು ತೆರಳದಂತೆ ಉತ್ತಮ ಚಿಕಿತ್ಸೆ ನೀಡಬೇಕಾಗಿದೆ. ಸುಮಾರು 40 ಲಕ್ಷ ಫಲಾನುಭವಿಗಳು ಇದ್ದಾರೆ. ಅತ್ಯಾಧುನಿಕ ಸಲಕರಣೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಜನರಿಗೆ ನೀಡಬೇಕು. ಅನುದಾನದ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ, ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ ಸೇರಿದಂತೆ ಇತರರು ಇದ್ದರು.
*ದಿನದ ಮಹತ್ವದ ಸುದ್ದಿಗಳು*
1) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಇಂದು 127 ನೂತನ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಾಲನೆ ನೀಡಿದರು.
2)ಪುರುಷರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸ್ಪಷ್ಟ ಪಡಿಸಿದ್ದಾರೆ.
3) ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತಂಡದಿಂದ ನ.25ರಿಂದ ಒಂದು ತಿಂಗಳ ವಕ್ಫ್ ಜಾಗೃತಿ ಅಭಿಯಾನ. ಕೇಂದ್ರ ಸರ್ಕಾರದ ಬೆಂಬಲ ಘೋಷಣೆ ಎಂದು ಹೇಳುವ ಮೂಲಕ ರಾಜ್ಯ ಅಧ್ಯಕ್ಷರಿಗೆ ಸವಾಲು.