ಧಾರವಾಡ:ನಿವೃತ್ತಿ ದಿನವೇ ಧಾರವಾಡದ ಲೋಕೋಪಯೋಗಿ ಚೀಫ್ ಇಂಜಿನಿಯರ್ ಎಚ್.ಸುರೇಶ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಬಿಸಿ ಮುಟ್ಟಿಸಿದ್ದಾರೆ.
ಇಲ್ಲಿನ ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸುರೇಶ್ ಅವರ ಸರ್ಕಾರಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇವತ್ತೇ ಸೇವೆಯಿಂದ ನಿವೃತ್ತಿಯಾಗಲಿದ್ದರು ಎಂಬುದು ವಿಶೇಷವಾಗಿದೆ.
ಆದಾಯ ಮೀರಿ ಗಳಿಕೆ ಮಾಡಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.ಪೇಡೆ ನಗರಿ ಅಲ್ಲದೆ, ಕುಂದಾನಗರಿ ಬೆಳಗಾವಿಯಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಸುರೇಶ ಅಕ್ರಮ ಆಸ್ತಿ ಮಾಡಿದ್ದಾರೆ ಎಂಬ ಆರೋಪವಿದೆ.
ಗದಗ, ಬಳ್ಳಾರಿ ಸಹಿತ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಇಂದು ಬಲೆ ಬೀಸಿದೆ.