*ಸಿಎಂ ಸೂಚನೆ ಮೇರೆಗೆ ಕಾಶ್ಮೀರದಲ್ಲಿ / ಮೃತದೇಹಗಳ ಗುರುತಿಸಲು ನೆರವು / ಇಬ್ಬರ ಗುರುತು ಪತ್ತೆ*
ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತಲುಪಿದ್ದು, ಪಹಲ್ಗಾಮ್ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.
ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.
“ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ.
*ಇಬ್ಬರ ಗುರುತು ಪತ್ತೆ*
ಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗ ಮತ್ತು ರಾಣೇಬೆನ್ನೂರಿನ ಇಬ್ಬರು ಪ್ರವಾಸಿಗರ ಗುರುತು ಪತ್ತೆಯಾಗಿದ್ದು, ಇನ್ನೂ ಒಬ್ಬರ ಗುರುತು ಸಿಗಬೇಕಿದೆ
ಶಿವಮೊಗ್ಗ ಮೂಲದ ಮಂಜುನಾಥ, ಬೆಂಗಳೂರಿನ ಭರತ್ ಭೂಷಣ ಎಂಬುವವರ ಗುರುತು ಪತ್ತೆಯಾಗಿದೆ.
*ಲಾಡ್ಗೆ ಧನ್ಯವಾದ ಹೇಳಿದ ಪ್ರವಾಸಿಗರು*
ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ತೊಂದರೆಗೊಳಗಾಗಿರುವ ಕನ್ನಡಿಗ ಪ್ರವಾಸಿಗರು ಸಚಿವ ಸಂತೋಷ್ ಲಾಡ್ ಅವರ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ.
“ಸಚಿವ ಲಾಡ್ ಅವರಿಗೆ ಬೆಳಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್ ಅವರು ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗೆ ಇದೆ. ಲಾಡ್ ಅವರಿಗೆ ಧನ್ಯವಾದಗಳು” ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.
ಸಂತ್ರಸ್ತರಾಗಿರುವ ಕನ್ನಡಿಗ ಪ್ರವಾಸಿಗರಿಗೆ ಲಾಡ್ ಅವರು ಧೈರ್ಯ ಹೇಳಿ ಅವರ ಯೋಗಕ್ಷೇಮವನ್ನೂ ವಿಚಾರಿಸಿದರು.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ವಾಪಸಾಗುತ್ತಿದ್ದು ಉಗ್ರರಿಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಾರೆ.