ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ಸಂಕ್ರಾಂತಿ ಹಬ್ಬದ ಕಾರಣ ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬೀರುತ್ತಿದ್ದ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು ಅವರು ಹಾಗೂ ಸಹೋದರ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ.
ಹೆಬ್ಬಾಳ್ಕರ್ ಕಾರು ಇಂದು ಬೆಳಗಿನ ಜಾವ 5-30ರ ಸುಮಾರಿಗೆ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಭೀಕರ ರಸ್ತೆ ಅವಘಡ ಸಂಭವಿಸಿದ್ದು
ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಲಕ್ಷ್ಮೀ ಹೆಬ್ಬಾಳ್ಳರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಕೂಡಾ ಗಾಯವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎಂದು ವೈದ್ಯ ಡಾ.ರವಿ ಪಾಟೀಲ್ ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.