ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ನ ಜಾಮೀನು ಅರ್ಜಿಯನ್ನು ಹೈಕೋರ್ಟ್ ಪೀಠ ಇಂದು (ಮಂಗಳವಾರ) ವಜಾಗೊಳಿಸಿದೆ.

ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಫಯಾಜ್ನ ಬೇಲ್ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆತ ಹೈಕೋರ್ಟ್ ಮೆಟ್ಟಿಲೇರಿದ್ದನು. ಆದರೆ, ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿದ ಹೈಕೋರ್ಟ್ ಪೀಠವು, ಆರೋಪಿಗೆ ಜಾಮೀನು ನೀಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದೆ.
ನೇಹಾ ಪರ ನ್ಯಾಯವಾದಿ ರಾಘವೇಂದ್ರ ಮುತ್ತಗೀಕರ ಘಟನೆ ಅತ್ಯಂತ ಕ್ರೂರವಾಗಿ ಕೊಲೆ ನಡೆದಿದ್ದು ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ವಾದ ಮಂಡಿಸಿದ್ದರು. ಈ ಆದೇಶ ನೇಹಾ ಕುಟುಂಬದವರ ಕಾನೂನು ಹೋರಾಟಕ್ಕೆ ಮತ್ತಷ್ಟು ಬಲ ತಂದಿದೆ.ಈಗಾಗಲೇ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ.




