ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ.
ನೇಹಾ ಹತ್ಯೆ ಆರೋಪಿ ಫಯಾಜ್ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ನ್ಯಾಯಾಲಯ ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ.
ಮೃತ ನೇಹಾ ಅವರ ತಾಯಿ ಗೀತಾ ನಿರಂಜನ ಹಿರೇಮಠ ಫಿರ್ಯಾದಿದಾರರು ಆಗಿದ್ದು ಫಿರ್ಯಾದಿದಾರರ ಪರ ವಕೀಲರಾದ ರಾಘವೇಂದ್ರ ಮುತಗೀಕರ ವಾದವನ್ನು ಮಂಡಿಸಿದ್ದಾರೆ. ವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ.
*ಕಾಲ್ತುಳಿತ ಘಟನೆ : ಅಮಾನತು ವಾಪಸ್*
ಬೆಂಗಳೂರು : ಕರ್ನಾಟಕ ಸರ್ಕಾರ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ, ಐಪಿಎಸ್ ಅಧಿಕಾರಿ ಬಿ.ದಯಾನಂದ ಸೇರಿದಂತೆ ನಾಲ್ವರು ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದಿದೆ.
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಅವರನ್ನು ಅಮಾನತು ಮಾಡಲಾಗಿತ್ತು. ಸೋಮವಾರ ಅಮಾನತು ವಾಪಸ್ ಪಡೆಯುವ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕೆ.ವಿ.ಅಶೋಕ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-4) ಆದೇಶವನ್ನು ಹೊರಡಿಸಿದ್ದಾರೆ.ಪಶ್ಚಿಮ ವಿಭಾಗದ ಮಾಜಿ ಡಿವೈಎಸ್ಪಿ ಬಾಲಕೃಷ್ಣ, ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ, ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಿರೀಶ್ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.