*ಬಿಜೆಪಿಯಿಂದ ಅನವಶ್ಯಕ ರಾಜಕಾರಣ : ಪರಂ , ಎಚ್ಕೆ ಹೇಳಿಕೆ / ಅಲ್ಪಸಂಖ್ಯಾತರ ತುಷ್ಟೀಕರಣ : ಶೆಟ್ಟರ್*
ಹುಬ್ಬಳ್ಳಿ/ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಿಚಾರದಲ್ಲಿ ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿದೆ ಎಂದು ಸಚಿವರಾದ ಡಾ. ಜಿ.ಪರಮೇಶ್ವರ, ಎಚ್.ಕೆ.ಪಾಟೀಲ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ನಮ್ಮ ಮುಂದೆ 56 ಕೇಸ್ಗಳು ಬಂದಿದ್ದವು. 43 ಕೇಸ್ಗಳನ್ನು ಹಿಂಪಡೆಯಲಾಗಿದೆ .ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಬೇರೆಬೇರೆ ಸಂದರ್ಭಗಳಲ್ಲಿ ಪ್ರತಿಭಟನೆ ಮಾಡಿರುವ ಪ್ರಕರಣಗಳಿವೆ. ಅವೆಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ ಅಥವಾ 43 ಪ್ರಕರಣಗಳೂ ಅಲ್ಪಸಂಖ್ಯಾತರಿಗೆ ಸೇರಿರುವ ಪ್ರಕರಣಗಳಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು. ಆ ರೀತಿ ಮಾಡಲು ಬರುವುದಿಲ್ಲ ಎಂದಿದ್ದಾರೆ.
ಕಾನೂನಿನ ಚೌಕಟ್ಟಿನಲ್ಲಿ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಮಾಡಿದ್ದೇವೆ.ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಅನೇಕ ಪ್ರಕರಣಗಳಲ್ಲಿ ಬೇಕಾದಷ್ಟು ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಇದೇ ಮಾಡಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರ ವಿರುದ್ಧ ಕೇಸ್ಗಳಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ಕೇಸ್ಗಳನ್ನು ವಾಪಸ್ ಪಡೆದಿದ್ದಾರೆಂದು ಆರೋಪಿಸಿದರು.
ಹಳೇ ಹುಬ್ಬಳ್ಳಿ ವಿಚಾರ ಸಚಿವ ಸಂಪುಟದ ಉಪ ಸಮಿತಿ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಹಾಗೂ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತದ್ದು.
ನಾವು ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿಲ್ಲ. ಬಿಜೆಪಿ ಆ ರೀತಿ ಬಿಂಬಿಸುವ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಮಾಡಲುವುದು ತಪ್ಪಾ ಎಂದು ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ ಪಾಟೀಲ್ ಪ್ರಶ್ನಿಸಿದ್ದಾರೆ .
ಇನ್ನೊಂದೆಡೆ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಒಂದು ಅಬ್ಬಯ್ಯ ಸಹ ಸರ್ಕಾರದ ಕ್ರಮ ಸಮರ್ಥಿಸಿಕೊಂಡಿದ್ದಾರೆ.
ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ದವಾಗಿದೆ ಎಂದು ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಕೆಳಮಟ್ಟಕ್ಕೆ ಹೋಗಿದೆ ಗೊತ್ತಾಗುತ್ತಿಲ್ಲ ಎಂದರು.
ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಹಾಕಲಾಗಿತ್ತು. ಕಡಿಮೆ ಸಮಯದಲ್ಲಿ ಸಾವಿರಾರು ಜನ ಸೇರಿ ಗಲಭೆ ಮಾಡಿದ್ದರು. ಆಗಿನ ಕಮಿಷನರ್ ಲಾಬೂರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಣ ಮಾಡಿ, ಅನಾಹುತ ತಪ್ಪಿಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ. ಮತಬ್ಯಾಂಕ್ ಗೆ ಸಮಾಜದ ವ್ಯವಸ್ಥೆ ಹಾಳು ಮಾಡುತ್ತಿದೆ ಎಂದು ಹರಿಹಾಯ್ದರು.
ವಿಎಚ್ಪಿ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಸಂಜು ಬಡಸ್ಕರ ಸರ್ಕಾರದ ನಿರ್ಧಾರ ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರಲ್ಲದೆ ನಮ್ಮ ವಕೀಲರ ತಂಡ ಅಗತ್ಯ ದಾಖಲೆಗಳನ್ನು ಕಲೆ ಹಾಕುತ್ತಿದೆ ಎಂದಿದ್ದಾರೆ.
*ದಿನದ ಮುಖ್ಯ ಸುದ್ದಿ*
1) *ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್, ಡಿ ಬಾಸ್ ಗೆ ಬಳ್ಳಾರಿ ಜೈಲೇ ಗತಿ*.
2) *ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಗೆ ಷರತ್ತುಬದ್ಧ ಜಾಮೀನು*.
3) *ಜಮ್ಮು ಕಾಶ್ಮೀರ ರಾಜ್ಯದ ರಾಷ್ಟ್ರಪತಿ ಆಳ್ವಿಕೆ ಅಂತ್ಯ*
4) *ಮುಂದಿನ ನಾಲ್ಕು ದಿನ 16 ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ*