*ಧಾರವಾಡ ಜಿಲ್ಲೆಗೆ ಹದಿನೇಳನೇ ಸ್ಥಾನ*
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ವನ್ನು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಅಂತಿಮ ಸ್ಥಾನ ಪಡೆದಿದೆ .
93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದ್ದರೆ,ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ.
ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ಈಕೆ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ 599 ಅಂಕಗಳನ್ನು ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ 597 ಅಂಕ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ವೀಕ್ಷಿಸಬಹುದು.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ.
ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡದ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ 599 ಅಂಕಗಳನ್ನು ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ 597 ಅಂಕ ಪಡೆದಿದ್ದಾರೆ.
2025ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕರ್ನಾಟಕ ಮಂಡಳಿಯು ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ನಡೆಸಿತು. ಮಾ.20ರ ವರೆಗೆ ನಡೆದಿದ್ದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದರು. ಸರ್ಕಾರಿ ಶಾಲೆಯ ಶೇ 57 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅನುದಾನ ಕಾಲೇಜುಗಳಲ್ಲಿ ಶೇ 67, ಅನುದಾನರಹಿತ ಕಾಲೇಜುಗಳಲ್ಲಿ ಶೇ 82 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಬೆಂಗಳೂರು ದಕ್ಷಿಣ 3ನೇ ಸ್ಥಾನ(ಶೇ.85.36), ಕೊಡಗು 4ನೇ ಸ್ಥಾನ (ಶೇ.83.84), ಬೆಂಗಳೂರು ಉತ್ತರ 5ನೇ ಸ್ಥಾನ (ಶೇ.83.31), ಉತ್ತರ ಕನ್ನಡ (ಶೇ.82.93), ಶಿವಮೊಗ್ಗ (ಶೇ.79.91), ಬೆಂಗಳೂರು ಗ್ರಾಮಾಂತರ (ಶೇ.79.70), ಚಿಕ್ಕಮಗಳೂರು (ಶೇ.79.56), ಹಾಸನ (ಶೇ.77.56), ಚಿಕ್ಕಬಳ್ಳಾಪುರ (ಶೇ.75.80), ಮೈಸೂರು (ಶೇ.74.30), ಚಾಮರಾಜನಗರ (ಶೇ.73.97), ಮಂಡ್ಯ (ಶೇ.72.27), ಬಾಗಲಕೋಟೆ (72.83), ಕೋಲಾರ (ಶೇ.72.45), ಧಾರವಾಡ (ಶೇ.72.32), ತುಮಕೂರು (ಶೇ.72.02), ರಾಮನಗರ (ಶೇ.69.71) ಫಲಿತಾಂಶ ಬಂದಿದೆ.