*ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಪ್ರಕಟ*
ಬೆಂಗಳೂರು : ಸ್ಪೀಕರ್ ಕಚೇರಿಯಲ್ಲಿ ಇಂದು ನಡೆದ ಮಹತ್ವದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಡಿಸಿಎಂ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಆರ್.ಅಶೋಕ, ಕಾನೂನು ಸಚಿವ ಎಚ್.ಕೆ.ಪಾಟೀಲ ಮತ್ತಿತರರು ಇಂದಿನ ಸಂಧಾನ ಸಭೆಯಲ್ಲಿ ಉಪಸ್ಥಿತರಿದ್ದರು.ಈ ಸಭೆಯಲ್ಲಿ ಸ್ಪೀಕರ್ ಈ ನಿರ್ಧಾರ ಪ್ರಕಟಿಸಿದ್ದಾರೆ.
ನಾಳೆ ಸ್ಪೀಕರ್ ಖಾದರ್ ಅವರು ಹಜ್ ಯಾತ್ರೆಗೆ ತೆರಳಲಿದ್ದು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದ್ದಾರೆ.
ಎಲ್ಲ ಶಾಸಕರು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಯಾವುದೇ ಷರತ್ತಿಲ್ಲದೇ ಆದೇಶ ಹಿಂಪಡೆಯಲಾಗಿದೆ ಎಂದು ಖಾದರ್ ಹೇಳಿದ್ದಾರೆ.ಕಳೆದ ಅಧಿವೇಶನದಲ್ಲಿ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶಿಸಿದ್ದರು.