ಹುಬ್ಬಳ್ಳಿ : ಸುಮಾರು ಮೂವತ್ತೈದು ವರ್ಷದ ವಯಸ್ಕ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಮೂವರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.
ಸ್ಥಳೀಯರೆ ಇಬ್ಬರೂ ಕಾಮಾಂಧರಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದು ಇನ್ನೋರ್ವ ವಿಡಿಯೋ ವೈರಲ್ ಮಾಡಿದವನಾಗಿದ್ದಾನೆ.

ಕಳೆದ ದಿ.9ರಂದು ಅಂಬೇಡ್ಕರ್ ಮೈದಾನದ ಬಳಿ ಮಹಿಳೆಯನ್ನು ಆಟೋದಲ್ಲಿ ಕರೆದುಕೊಂಡು ಹೋದ ಆರೋಪಿಗಳು, ಬಳಿಕ ಮದ್ಯಪಾನ ಮಾಡಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯವನ್ನು ವಿಡಿಯೋ ಮಾಡಲಾಗಿದ್ದು, ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ.
ಘಟನೆ ನಡೆದ ನಂತರ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಗಳಾದ ಶಿವಾನಂದ (29) ಮತ್ತು ಗಣೇಶ್ರ ಗಿಡ್ಡಣ್ಣವರ(31) ಎಂಬುವವರೇ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದಾರೆ. ಪ್ರದೀಪ್ ವಿಡಿಯೋ ವೈರಲ್ ಮಾಡಿದವನಾಗಿದ್ದಾನೆ.
ಪೊಲೀಸ್ ಮಾಹಿತಿ ಪ್ರಕಾರ, ಶಿವಮೊಗ್ಗ ಮೂಲದ ಮಹಿಳೆ ಗಂಡನೊಂದಿಗೆ ಉಂಟಾದ ಗೃಹ ಕಲಹದಿಂದ ಮನೆ ಬಿಟ್ಟು ಹುಬ್ಬಳ್ಳಿಗೆ ಬಂದಿದ್ದು ಆಕೆಯ ಪತಿ ಪ್ರಕರಣವೊಂದರಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದಾನೆ ಎನ್ನಲಾಗಿದೆ .ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದ ಮಹಿಳೆ ಸಿದ್ಧಾರೂಢ ಮಠದ ಪ್ರಸಾದ ತಿಂದು ಹುಬ್ಬಳ್ಳಿಯಲ್ಲಿ ಅಲೆದಾಡುತ್ತಿದ್ದಳು.

ಶನಿವಾರ ರಾತ್ರಿ ಹಳೆ ಹುಬ್ಬಳ್ಳಿಯ ಹೆಗ್ಗೆರಿ ಮೈದಾನ ಪ್ರದೇಶದಿಂದ ಇಬ್ಬರು ಆರೋಪಿಗಳು ಮಹಿಳೆಯನ್ನು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ.
ಆರೋಪಿಗಳಿಗೆ ಹಲ್ಲೆ ನಡೆಸಿದ ನಾಲ್ವರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರನ್ನು ಸಹ ಬಂಧಿಸಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.



