*ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಅರ್ಜಿ ವಜಾ*/ *ಮಾಜಿ ಸಚಿವರಿಗೆ ತೀವ್ರ ಸಂಕಷ್ಟ*
ಹುಬ್ಬಳ್ಳಿ :ಧಾರವಾಡ ಗ್ರಾಮೀಣ (71) ಕಾಂಗ್ರೆಸ್ ಶಾಸಕ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಆಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟನಲ್ಲಿ ಮತ್ತೊಮ್ಮೆ ತೀವ್ರ ಹಿನ್ನಡೆ ಆಗಿದೆ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ವಿನಯ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಆದರೆ ಸುಪ್ರೀಕೋರ್ಟ್ ವಿನಯ್ ಇವರು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಯೋಗೀಶಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಫಿ ಸಾಕ್ಷಿ ಯನ್ನಾಗಿ
ಪರಿಗಣಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದ ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿ, ಹೈಕೋರ್ಟ್ ಕೂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗದಂತೆ ಕೋರಿದ್ದ ಅರ್ಜಿ ವಜಾಗೊಳಿಸಿರುವುದು ಮಾಜಿ ಸಚಿವ ವಿನಯ್ ಕುಲಕರ್ಣಿ ಗೆ ಬರುವ ದಿನಗಳಲ್ಲಿ ತೀವ್ರ ಕಂಟಕವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಇನ್ನೊಂದೆಡೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗಿದ್ದು
ಯೋಗೀಶಗೌಡ ಸಹೋದರ ಗುರುನಾಥ ಗೌಡ ಕೋರ್ಟ್ ಗೆ ಹಾಜರಾಗಿದ್ದಾರೆ.